ಬೈಕ್ ಸವಾರ ಅಥವಾ ಹಿಂಬದಿ ಸವಾರ ಹೆಲ್ಮೆಟ್ ಧರಿಸದೇ ಇದ್ದರೆ ಅಂಥವರಿಗೆ ಇಂಧನ ಮಾರಾಟ ಮಾಡಕೂಡದು ಎಂದು ಎಲ್ಲಾ ಪೆಟ್ರೋಲ್ (Petrol) ಬಂಕ್‌ಗಳಿಗೆ ನಿರ್ದೇಶನ ನೀಡಿದೆ. ಜನವರಿ 8ರಂದು ರಾಜ್ಯದ ಸಾರಿಗೆ ಆಯುಕ್ತ ಬ್ರಜೇಶ್ ನರೈನ್ ಸಿಂಗ್(Brajesh Narain Singh) ಪತ್ರ ಬರೆದಿದ್ದಾರೆ. ಹೀಗಾಗಿ ಹೆಲ್ಮೆಟ್ ಹಾಕಿದವರಿಗೆ ಮಾತ್ರ ಪೆಟ್ರೋಲ್ ಸಿಗಲಿದೆ.
ಈ ಪತ್ರವನ್ನು ಎಲ್ಲಾ 75 ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗಿದ್ದು, ಈ ಬಗ್ಗೆ ತುರ್ತು ಗಮನಹರಿಸಬೇಕು ಎಂದು ಸೂಚಿಸಲಾಗಿದೆ. ಹೆಲ್ಮೆಟ್ ಧರಿಸದೇ ಇರುವುದರಿಂದ ಸಾವುನೋವಿನ ಸಂಖ್ಯೆಯ ದತ್ತಾಂಶವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
‘ದ್ವಿಚಕ್ರ ವಾಹನ ಸವಾರರನ್ನು ಒಳಗೊಂಡ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಾವುಗಳು ಹೆಲ್ಮೆಟ್ ಬಳಸದ ಕಾರಣದಿಂದ ಸಂಭವಿಸುತ್ತಿವೆ. ಈ ನೀತಿಯು ಜೀವಗಳನ್ನು ಉಳಿಸುವ ಮತ್ತು ರಸ್ತೆ ಸುರಕ್ಷತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ’ ಎಂದು ಪತ್ರದಲ್ಲಿ ಹೇಳಲಾಗಿದೆ.
ಈ ಉಪಕ್ರಮವನ್ನು ಈ ಹಿಂದೆ 2019 ರಲ್ಲಿ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಪರಿಚಯಿಸಲಾಗಿತ್ತು. ಆದರೆ ಸಮರ್ಪಕವಾಗಿ ಜಾರಿಯಾಗಿರಲಿಲ್ಲ. ಆದರೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.