ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು BEL India bel-india.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು 350 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದಕ್ಕಾಗಿ ಅರ್ಜಿ ಪ್ರಕ್ರಿಯೆಯು ಜ. 10 ರಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಕೊನೆಯ ದಿನವಾಗಿದೆ. ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್) E-II ಗ್ರೇಡ್ -200 ಹುದ್ದೆಗಳು, ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) E-II ಗ್ರೇಡ್ – 150 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳ ನೇಮಕಾತಿಗಾಗಿ AICTE ಮಾನ್ಯತೆ ಪಡೆದ ಕಾಲೇಜುಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ ಸಂವಹನ/ಟೆಲಿಕಮ್ಯುನಿಕೇಶನ್/ಮೆಕ್ಯಾನಿಕಲ್ ವಿಷಯಗಳಲ್ಲಿ BE/B.Tech/ ಹೊಂದಿರಬೇಕು. ಪ್ರಥಮ ಗ್ರೇಡ್ ನೊಂದಿಗೆ B.Sc ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
ಅಭ್ಯರ್ಥಿಗಳ ವಯಸ್ಸಿನ ಮಿತಿ ಗರಿಷ್ಠ 25 ವರ್ಷಗಳು. ಜ. 1, 2025 ರಂತೆ ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಇತರ ವರ್ಗಗಳ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಹೊಂದಿರುತ್ತದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಮತ್ತು ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಿದ ಎಲ್ಲಾ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ bel-india.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.