ಬೆಂಗಳೂರು: ಮಾವನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಇಲ್ಲಿಯ ಎಚ್ ಎಎಲ್ ಹತ್ತಿರ ನಡೆದಿದೆ. ಮಾವ ಯುವತಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಸುಹಾಸಿ ಸಿಂಗ್(24) (Suhasi Singh) ಆತ್ಮಹತ್ಯೆಗೆ ಶರಣಾದ ಯುವತಿ. ಯುವತಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಮಾವ ಪ್ರವೀಣ್ ಸಿಂಗ್ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.
ಜ. 12 ರಂದು ಕುಂದಲಹಳ್ಳಿಯ ಹೊಟೇಲ್ ಗೆ ಕರೆದಿದ್ದಾನೆ. ಈ ವೇಳೆ ಹೊಟೇಲ್ ನಲ್ಲಿ ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಯುವತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಇಂದು ಸಾವನ್ನಪ್ಪಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಎಎಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರವೀಣ್ ಸಿಂಗ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಆರೋಪಿಯು ಮೃತ ಸುಹಾಸಿ ಸಿಂಗ್ ತಂದೆಯ ತಂಗಿ ಗಂಡನಾಗಿದ್ದಾನೆ. ಕೆಲವು ದಿನಗಳ ಹಿಂದೆ ಸುಹಾಸಿ ಸಿಂಗ್ ಮನೆಯಲ್ಲಿ ವಾಸಿಸುತ್ತಿದ್ದ. ಈ ಸಂದರ್ಭದಲ್ಲಿ ಯುವತಿಯ ಖಾಸಗಿ ಪೋಟೊ, ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.