ಮಂಗಳೂರು: ಬೀದರ್ ಎಟಿಎಂ ಹಣ ದೋಚಿ ಖದೀಮರು ಪರಾರಿಯಾಗಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಜಿಲ್ಲೆಯಲ್ಲೂ ಇಂತಹ ಘಟನೆಯೊಂದು ನಡೆದಿದೆ.
ಜಿಲ್ಲೆಯ ಉಳ್ಳಾಲದಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ ನ ಕೋಟೆಕಾರು ಬ್ಯಾಂಕ್ ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ.
ಪೊಲೀಸರು ಸಿಎಂ ಭದ್ರತೆಗೆ ಹೋಗಿದ್ದಾಗ ನಡೆದ ಘಟನೆ
ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರು ಭದ್ರತೆಗೆ ತೆರಳಿದ್ದರು. ಹೀಗಾಗಿ ದರೋಡೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಬ್ಯಾಂಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.