ವಿಜಯಪುರ: ಇಟ್ಟಂಗಿಭಟ್ಟಿ(Ittangibhatti) ಮಾಲೀಕನೊಬ್ಬ ಕೂಲಿ ಕಾರ್ಮಿಕರ ಮೇಲೆ ಅವಮಾನವೀಯವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ನಗರದಲ್ಲಿ ನಡೆದಿದೆ. ಹಬ್ಬಕ್ಕೆ ಹೋದ ಕಾರ್ಮಿಕರು ತಡವಾಗಿ ಬಂದಿದ್ದಕ್ಕೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ. ಕೈ ಕಾಲು ಕಟ್ಟಿ,ಕಾಲ ಮೇಲೆ ನಿಂತು ಪೈಪ್ ನಿಂದ ಹಲ್ಲೆ ನಡೆಸಿ ಅಂಗಾಲು, ಬೆನ್ನು, ಸೊಂಟದ ಮೇಲೆ ಹಲ್ಲೆ ನಡೆಸಿದ್ದಾನೆ. ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಹತ್ತಿರ ಈ ಘಟನೆ ನಡೆದಿದೆ.
ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತ ಸದಾಶಿವ ಮಾದರ,(Sadashiva model) ಸದಾಶಿವ ಬಬಲಾದಿ, ಉಮೇಶ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದಾನೆ. ಮುಂಗಾಲಿಗೆ ಬಡಿಗೆಯಿಂದ ಹೊಡೆದು ಹಿಂಸೆ ನೀಡಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ಮರಳಿ ಬರುವಾಗ ವಿಳಂಬವಾಗಿತ್ತು ಎನ್ನಲಾಗಿದೆ. ಎಷ್ಟೇ ಬೇಡಿಕೊಂಡರೂ ಬಿಡದೆ ರಾಕ್ಷಸಿ ಮನಸ್ಥಿತಿಯ ಮಾಲೀಕ ಹಲ್ಲೆ ನಡೆಸಿದ್ದಾನೆ. ಈ ಕುರಿತು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ(police station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.