ಬೆಳಗಾವಿ: ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಜ. 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಶಾಲಾ-ಕಾಲೇಜುಗಳಿಗೆ(School-college) ರಜೆ ಘೋಷಿಸಲಾಗಿದೆ
ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ(Golden building) ಹತ್ತಿರ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಹಾತ್ಮ ಗಾಂಧೀಜಿ 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್(congress) ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭದ ಪ್ರಯುಕ್ತ ಲಕ್ಷಾಂತರ ಜನ ಭಾಗವಹಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.