ಬೆಂಗಳೂರು: ಬಸ್ ಗೆ ಕಾಯುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ(rape) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇಂದ್ರ ಮಹಿಳಾ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸರವಣ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಈ ಕುರಿತು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ(police station) ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳು ಕೆ.ಆರ್. ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಡ್ರಾಪ್ ನೀಡುವ ನೆಪದಲ್ಲಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು.
ಈ ಕುರಿತು ಸಂತ್ರಸ್ತೆ ಯುವತಿ ಬೆಂಗಳೂರಿನ ಎಸ್.ಜೆ. ಪಾರ್ಕ್ ಠಾಣೆಗೆ ದೂರು ಸಲ್ಲಿಸಿದ್ದರು. ಭಾನುವಾರ (ಜ.19)ರಂದು ರಾತ್ರಿ ವೇಳೆ ಯುವತಿ ಯಲಹಂಕಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಇಬ್ಬರು ಯುವಕರು ಡ್ರಾಪ್ ಕೊಡುವ ನೆಪದಲ್ಲಿ ಬೇರೆ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆಂದು ಯುವತಿ ಆರೋಪಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.