ಬೆಂಗಳೂರು: ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೂರು ಮ್ಯಾರಥಾನ್ ಸಭೆಗಳು ನಡೆಯುತ್ತಿವೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲಾ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ನಡೆಯುತ್ತಿವೆ. ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ರಾಧಾಮೋಹನ್ ದಾಸ್ ಅಗರವಾಲಾ(Radhamohan Das Agarwala) ರಾಜ್ಯಕ್ಕೆ ಆಗಮಿಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಸಕರು, ಸಂಸದರು, ಪರಿಷತ್ ಸದಸ್ಯರು ಭಾಗವಹಿಸಲಿದ್ದು, ಅವರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಸಂಜೆ 4ಕ್ಕೆ ಸಂಘಟನೆ ಪರ್ವದ ಪರಿಶೀಲನೆ ನಡೆಯಲಿದೆ. ಜಿಲ್ಲಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೇ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ಕೂಡ ಚರ್ಚೆ ನಡೆಯಲಿದೆ.
ಸಂಜೆ 7ಕ್ಕೆ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಯತ್ನಾಳ್ ಬಣದ ಹೇಳಿಕೆಗಳು, ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.