ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ-ಐಕ್ಯಾಟ್ (Establishment of ICAT center in Bangolore) ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumarasawmy) ಹೇಳಿದ್ದಾರೆ.,
ವಿಷಯವಾಗಿ ಮಾತನಾಡಿರುವ ಅವರು, ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಆಟೋಮೊಬೈಲ್ ಕ್ಷೇತ್ರದ ಹಬ್ ಆಗಿ ಬೆಂಗಳೂರು ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಆರಂಭಿಸುವ ಕುರಿತು ಕಾರ್ಯಗಳು ನಡೆಯುತ್ತಿವೆ ಎಂದಿದ್ದಾರೆ.
ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನ, ಸಾಫ್ಟ್ವೇರ್ ನಿಯಂತ್ರಿತ ವಾಹನಗಳು, ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಮಾಡುವುದರಿಂದ ಅಕ್ಕಪಕ್ಕದ ರಾಜ್ಯಗಳಿಗೂ ಅನುಕೂಲವಾಗಿದೆ. ಆಟೋಮೊಬೈಲ್ ಆವಿಷ್ಕಾರಕ್ಕೆ ಉತ್ತೇಜನ ದೊರೆಯಲಿದೆ ಎಂದಿದ್ದಾರೆ.