ಭಾರತೀಯ ಕ್ರಿಕೆಟ್ ತಂಡದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್(Arshdeep Singh) ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ತಮ್ಮ ಮೊದಲ 2 ಓವರ್‌ಗಳಲ್ಲಿ ಪ್ರಮುಖ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅರ್ಷದೀಪ್ ಸಿಂಗ್ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಮಾಡಿದ್ದಾರೆ. ಅರ್ಷದೀಪ್ ಸಿಂಗ್ 2022ರಲ್ಲಿ ಭಾರತೀಯ ಟಿ20 ತಂಡ ಸೇರಿಕೊಂಡಿದ್ದಾರೆ. ಈಗ ಕೇವಲ 2 ವರ್ಷಗಳಲ್ಲೇ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದಾರೆ.
ಇಂದು ನಡೆದ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲೂ ಉತ್ತಮ ಬೌಲಿಂಗ್ ಮಾಡಿದ್ದಾರೆ. ತಮ್ಮ ಮೊದಲ ಓವರ್ ನಲ್ಲೇ ಫಿಲ್ ಸಾಲ್ಟ್ ವಿಕೆಟ್ ಪಡೆಯುವುದರ ಮೂಲಕ ಇಂಗ್ಲೆಂಡ್ ಗೆ ಆಘಾತ ನೀಡಿದರು. ಹೀಗಾಗಿ ಫಿಲ್ ಸಾಲ್ಟ್ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಈ ವಿಕೆಟ್ ಪಡೆಯುವದರ ಮೂಲಕ ಅರ್ಷದೀಪ್ ಸಿಂಗ್, ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಯುಜುವೇಂದ್ರ ಚಾಹಲ್ ರನ್ನು ಸರಿಗಟ್ಟಿದರು. ನಂತರ, ತಮ್ಮ ಮುಂದಿನ ಓವರ್ ನಲ್ಲಿ ಬೆನ್ ಡಕೆಟ್ ವಿಕೆಟ್ ಪಡೆಯುವ ಮೂಲಕ ಚಹಲ್ ದಾಖಲೆ ಮುರಿದರು.
ಅರ್ಷದೀಪ್ ಸಿಂಗ್ ಗಿಂತ ಮೊದಲು, ಯುಜ್ವೇಂದ್ರ ಚಹಾಲ್ 96 ವಿಕೆಟ್‌ಗಳೊಂದಿಗೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಭಾರತದ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದಿದ್ದರು. ಈಗ ಅರ್ಷದೀಪ್ ಸಿಂಗ್ ಕೇವಲ 61 ಪಂದ್ಯಗಳಲ್ಲಿ 97 ವಿಕೆಟ್ ಪಡೆಯುವ ಮೂಲಕ ಚಹಾಲ್ ದಾಖಲೆ ಮುರಿದಿದ್ದಾರೆ. ಮೂರನೇ ಸ್ಥಾನದಲ್ಲಿ 90 ವಿಕೆಟ್ ಪಡೆಯುವುದರ ಮೂಲಕ ಭುವನೇಶ್ವರ್ ಕುಮಾರ್ ಇದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ತಲಾ 89 ವಿಕೆಟ್ ಪಡೆದು ನಂತರದ ಸ್ಥಾನದಲ್ಲಿದ್ದಾರೆ.