ಉಡುಪಿ: ಜಾಗದ ದಾಖಲೆಗೆ ಲಂಚ ಕೇಳಿ, ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಭ್ರಷ್ಟ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಲಾಕ್ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಗಂಗೊಳ್ಳಿ ಗ್ರಾಪಂನ ಪಿಡಿಒ ಹಾಗೂ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಹನೀಫ್ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಹನೀಫ್ ಅವರ ಜಾಗದ 9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಂಗೊಳ್ಳಿ ಪಿಡಿಒ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಖರ ಬಿ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಗ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಅಮನುಲ್ಲ, ಚಂದ್ರಶೇಖರ್, ಲೋಕಾಯುಕ್ತ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮಹಮ್ಮದ್ ಹನೀಫ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.