ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಮನೆಯಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರಭಾವಿಯ ಇಲ್ಲಿನ ನಾಗರಭಾವಿಯ(Nagarabhavi) ಎನ್ಜಿಎಫ್ ಲೇಔಟ್ನ ಅಪಾರ್ಟ್‌ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ (39) ಆತ್ಮಹತ್ಯೆ(suicied) ಮಾಡಿಕೊಂಡ ಪತಿ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ಯಾಬ್ ಡ್ರೈವರ್ ಆಗಿದ್ದ ಮಂಜುನಾಥ್ (Manjunath) 2013 ರಲ್ಲಿ ನಯನ ಎಂಬುವವರನ್ನು ವಿವಾಹವಾಗಿದ್ದರು. ಈ ದಂಪತಿಗೆ 9 ವರ್ಷದ ಮಗ ಕೂಡ ಇದ್ದಾನೆ. ಆದರೆ ಇತ್ತೀಚೆಗೆ ಪತಿ ಹಾಗೂ ಪತ್ನಿಯ ಮಧ್ಯೆ ಜಗಳ ನಡೆಯುತ್ತಿತ್ತು. ಹೀಗಾಗಿ ದಂಪತಿ ಡಿವೋರ್ಸ್ ಮೊರೆ ಹೋಗಿದ್ದರು. 2022 ಕ್ಕೆ ಡಿವೋರ್ಸ್ಗೆ(divorce) ಅಪ್ಲೈ ಮಾಡಿದ್ದರು.
ಹೆಂಡತಿಯ ಬಳಿ ಡಿವೋರ್ಸ್ ಬೇಡ ಎಂದಿದ್ದ ಮಂಜುನಾಥ್, ಮತ್ತೆ ಒಂದಾಗಿ ಬಾಳೋಣ ಅಂತಾ ಕೇಳಲು ಎನ್ಜಿಎಫ್ ಲೇಔಟ್ನಲ್ಲಿರುವ ಹೆಂಡತಿ ಮನೆಗೆ ಹೋಗಿದ್ದರು. ಈ ವೇಳೆ ಹೆಂಡತಿ ಇದ್ದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.