ಬೆಂಗಳೂರು: ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಇದೆ. ಈ ದಿನವನ್ನು ವಿಶೇಷವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಲಿಂಗಾನುಪಾತ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮ ರೂಪಿಸಿದೆ.
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಜ.24 ರಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ವಿಶೇಷ ಉಡುಗೊರೆ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅಂದು ಜನಿಸುವ ಹೆಣ್ಣು ಮಗುವಿಗೆ 1 ಸಾವಿರ ರೂ. ಬೆಲೆಯ ಮಕ್ಕಳ ಕಿಟ್ಸ್‌ಗಳನ್ನು ಉಡುಗೊರೆಯಾಗಿ ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಅಳವಡಿಸಲು ಸೂಚಿಸಲಾಗಿದೆ.
ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಗಳು ರಕ್ತ ಹೀನತೆ ಹೋಗಲಾಡಿಸಲು ಶ್ರಮಿಸುತ್ತಿವೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆಗಳನ್ನು ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.