ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಬಾಗಿನ ಅರ್ಪಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ(Siddaramaiah) ಐದು ವರ್ಷ ಅಧಿಕಾರ ನಡೆಸುತ್ತೇವೆ. ಅಲ್ಲದೇ, ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.
ನಮ್ಮಲ್ಲಿ ಯಾವುದೇ ಆಂತರಿಕ ಬಣ ಗುದ್ದಾಟ ಇಲ್ಲ. ಆದರೆ, ಅದು ಇರುವುದು ಬಿಜೆಪಿಯಲ್ಲಿ. ಅವರು ಬಣ ಮಾಡಿಕೊಂಡು ಕಿತ್ತಾಡುತ್ತಿದ್ದಾರೆ. ನಾವು ಒಗ್ಗಟ್ಟಾಗಿದ್ದೇವೆ ಎಂದಿದ್ದಾರೆ. ನಾನು, ಡಿಕೆಶಿ ಇಲ್ಲಿಯೇ ಇದ್ದೇವೆ. ಬಣ ರಾಜಕೀಯ ಇದ್ದರೆ, ನಾವೇಕೆ ಒಟ್ಟಿಗೆ ಇರುತ್ತಿದ್ದೇವು? ನಾವೆಲ್ಲ ಒಗ್ಗಟ್ಟಿನಿಂದಲೇ ಇದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸಂಸದರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5,300 ಕೋಟಿ ರೂ. ಬಿಡುಗಡೆ ಮಾಡಿಸಬೇಕು. ಬಿಜೆಪಿ ಕೊಟ್ಟ ಮಾತಿಗೆ ವಂಚಿಸುತ್ತದೆ. ನಾವು ಕೊಟ್ಟ ಮಾತು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.