ಬೆಂಗಳೂರು: ಮಂತ್ರಿ ಮಾಲ್ ನ ಒಳಗೆ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಜುಮಾಥ್ (55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮಂಜುನಾಥ್ 2 ಕೋಟಿ ರೂ. ಗೂ ಅಧಿಕ ಸಾಲ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗುರುವಾರ ರಾತ್ರಿ 9ರ ವೇಳೆಗೆ ಈ ಘಟನೆ ನಡೆದಿದೆ. ಮಂಜುನಾಥ್ ಎಲೆಕ್ಟ್ರಿಕ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. 2 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದರಿಂದಾಗಿ ತೀರಿಸಲು ಆಗಿಲ್ಲ. ಹೀಗಾಗಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಕೋಟಿ ರೂ. ಸಾಲ ಮಾಡಿಕೊಂಡಿದ್ದೇನೆ. ಅದನ್ನು ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ ನೋಟ್ ಬರೆದು ಸೂಸೈಡ್ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಕುಟುಂಬಸ್ಥರ ಹೆಸರು ಕೂಡ ಮಂಜುನಾಥ್ ಬರೆದಿಟ್ಟಿದ್ದಾರೆ. ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.