ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ಮಿತಿ ಮೀರುತ್ತಿದೆ. ಖದೀಮರು ರಾಜಾರೋಷವಾಗಿ ಕಾರಿನ ಗ್ಲಾಸ್ ಒಡೆದು ಬ್ಯಾಗ್ ಎಗರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಪ್ರಕರಣದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಹೊಂಚು ಹಾಕಿ, ಕ್ಷಣ ಮಾತ್ರದಲ್ಲಿ ಕಾರಿನ ಗ್ಲಾಸ್ ಒಡೆದು, ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಈ ಕುರಿತು ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಕುರಿತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದೆ. ಈ ಹಿಂದೆ ಕೂಡ ಇದೇ ರೀತಿ ಘಟನೆಗಳು ನಡೆದಿರುವ ಕುರಿತು ವರದಿಯಾಗಿವೆ. ಈಗ ಮತ್ತೆ ಕಾರಿನ ಗಾಜು ಒಡೆದು ಬ್ಯಾಗ್ ಎಗರಿಸಿ ಖದೀಮರು ಪರಾರಿಯಾಗಿದ್ದಾರೆ. ಈ ಕುರಿತು ಇಂದಿರಾ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.