ಬೆಂಗಳೂರು: ವಿವಾಹಿತ ಮಹಿಳೆ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಕಲ್ಕೆರೆ ಕೆರೆಯ ದಂಡೆಯ ಮೇಲೆ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ನಜ್ಮಾ ( 28 ) ಕೊಲೆಯಾಗಿರುವ ವಿವಾಹಿತ ಮಹಿಳೆ ಎನ್ನಲಾಗಿದೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಹಿಳೆ ಅಪಾರ್ಟ್ಮೆಂಟ್ ನಲ್ಲಿ ಮನೆ ಗೆಲಸ ಮಾಡಿಕೊಂಡಿದ್ದರು. ಅವರು ಕಲ್ಕೆರೆಯ ಡಿಎಸ್ ಆರ್ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೊಲೆಯಾಗಿರುವ ನಜ್ಮಾರನ್ನು ಬಾಂಗ್ಲಾದೇಶ ಮೂಲದವರು ಎಂದು ಗುರುತಿಸಲಾಗಿದೆ. ಇವರು ಸುಮನ್ ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಆರೋಪಿಗಳು ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾರೆ.