ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ವಿಚಾರಣೆ ಮಾರ್ಚ್ 22ಕ್ಕೆ ಮುಂದೂಡಿಕೆ ಮಾಡಲಾಗಿದೆ.
“ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ (Dr. Abhishek Manu Singhvi) ಅವರು ಮಾರ್ಚ್ 22ರಂದು ಭೌತಿಕವಾಗಿ ಪೀಠದ ಮುಂದೆ ಹಾಜರಾಗಿ, ವಾದ ಮಂಡನೆ ಮಾಡಲಿದ್ದಾರೆ” ಎಂದು ನ್ಯಾಯಾಲಯಕ್ಕೆ ವಕೀಲ ಶತಭಿಷ್ ಮಾಹಿತಿ ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಏಕ ಸದಸ್ಯ ಪೀಠ ಎತ್ತಿ ಹಿಡಿದಿತ್ತು.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭೂಮಾಲೀಕ ಜೆ ದೇವರಾಜು ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶನಿವಾರ ಮಾರ್ಚ್ 22ಕ್ಕೆ ಮುಂದೂಡಿಕೆ ಮಾಡಿದೆ.
ಈ ಪ್ರಕಣದಲ್ಲಿ ಈಗಾಗಲೇ ಲೋಕಾಯುಕ್ತದಿಂದ ಸಿಎ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.