ಧಾರವಾಡ: ಇನ್ ಸ್ಟಾಗ್ರಾಂ (Instagram) ಲವ್ ನಿಂದಾಗಿ ಗೃಹಿಣಿಯೊಬ್ಬಳು ವಿಚ್ಛೇದನ ಪಡೆದಿದ್ದಳು. ಆದರೆ, ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದನಕ್ಕೆ ಕಾರಣವಾಗಿದ್ದವ ಮಾತ್ರ ಕೈ ಕೊಟ್ಟಿದ್ದ. ಇದರಿಂದಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಆರೋಪ ಕೇಳಿ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಗೃಹಿಣಿಯ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ (Dharwad) ಶಿವಳ್ಳಿ ಗ್ರಾಮದ ವಿಜಯ್ ನಾಯ್ಕರ್ ಎಂದು ಗುರುತಿಸಲಾಗಿದೆ. ಶ್ವೇತಾ(32) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎನ್ನಲಾಗಿದೆ.
ಬಂಧಿತ ಆರೋಪಿಯು ಈತ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಶ್ವೇತಾ ವಿಚ್ಛೇದನಕ್ಕೆ ಕಾರಣವಾಗಿದ್ದ. ಹೀಗಾಗಿ ಮಹಿಳೆಯು ತನ್ನ ಪತಿ ಬಿಟ್ಟು, ಧಾರವಾಡದ ಶ್ರೀನಗರದಲ್ಲಿ ರೂಮ್ ಮಾಡಿಕೊಂಡಿದ್ದಳು. ಆದರೆ, ಇವರಿಬ್ಬರ ಮದುವೆಗೆ ವಿಜಯ್ ಕುಟುಂಬಸ್ಥರು ಒಪ್ಪಿಲ್ಲ ಎನ್ನಲಾಗಿದೆ. ಹೀಗಾಗಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.
ಶ್ವೇತಾ ನೇಣಿಗೆ ಶರಣಾಗುವ ಮುನ್ನ, ನನ್ನ ಸಾವಿಗೆ ನಾನೇ ಕಾರಣ ಎಂದು ಕೈಯಲ್ಲಿ ಬರೆದುಕೊಂಡಿದ್ದಳು. ಶ್ವೇತಾ ಕುಟುಂಬಸ್ಥರು ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ ವಿಜಯ್ ನಾಯ್ಕರ್ ವಿರುದ್ಧ ದೂರು ದಾಖಲಿಸಿದ್ದರು. ಬಂಧಿತನಿಂದಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.