ಆಫ್ರಿಕನ್ ದೇಶವಾಗಿರುವ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 18 ಜನ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಅಲ್ಲದೇ, ಈ ಭಯಾನಕ ಘಟನೆಯಲ್ಲಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟ್ರಕ್ ನ ಬ್ರೇಕ್ ವಿಫಲವಾದ ಪರಿಣಾಮ ಈ ದುರ್ಘಟನೆ ಸಂಭವಿಸುವಂತಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎಕ್ಸ್ ಪ್ರೆಸ್‌ವೇನಲ್ಲಿ ಸಾಗುತ್ತಿದ್ದ ಸುಮಾರು 17 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಬೆಂಕಿ ಹೊತ್ತಿಕೊಂಡು ಎಲ್ಲ ವಾಹನಗಳು ಸುಟ್ಟು ಭಸ್ಮವಾಗಿವೆ. ಮೂವರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.
ನೈಜೀರಿಯಾ ರಾಷ್ಟ್ರವು ಆಫ್ರಿಕಾದಲ್ಲಿ ಅತಿ ಹೆಚ್ಚು ತೈಲ ಉತ್ಪಾದಿಸುವ ದೇಶವಾಗಿದೆ. ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಕೂಡ ಹೌದು. ಸರಕು ಸಾಗಣೆಗೆ ಸಮರ್ಥ ರೈಲ್ವೆ ವ್ಯವಸ್ಥೆ ಇಲ್ಲ. ಹೀಗಾಗಿ ನೈಜೀರಿಯಾದಲ್ಲಿ ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ.