ಧಾರವಾಡ: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ಧರಾಮಯ್ಯರ ಕುಟುಂಬ ಸಂಕಷ್ಟ ಸಿಲುಕಲಿದೆಯೇ? ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ್ವಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ನ ಏಕಸದಸ್ಯ ಪೀಠ, ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮುಡಾ ನಿವೇಶನ ಹಂಚಿಕೆಯಲ್ಲಿ ಆಕ್ರಮ ನಡೆದಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಇತ್ತ ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಲೋಕಾಯುಕ್ತರ ಕಡೆಯಿಂದ ವಿಚಾರಣೆ ಮಾಡಿಸಿದ್ದು, ಲೋಕಾಯುಕ್ತ ಎಸ್ಪಿ ಕಡೆಯಿಂದ ಇಂದು ಧಾರವಾಡದ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡನೆ ಮಾಡಿದ್ದು, ಪ್ರಕರಣದಲ್ಲಿ ಸಿಎಂ ಕುಟುಂಬದ ಹಸ್ತಕ್ಷೇಪ ಇರುವ ಕಾರಣ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.
ಸರ್ಕಾರದ ಪರ ಪ್ರತಿವಾದವನ್ನು ವಕೀಲರ ಕಡೆಯಿಂದ ಆಲಿಸಿದ ಧಾರವಾಡ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾ.ಎಂ.ನಾಗಪ್ರಸನ್ನ, ತೀರ್ಪನ್ನು ಕಾಯ್ದಿರಿಸಿದ್ದು, ಸಿಎಂ ಹಾಗೂ ಅವರ ಕುಟುಂಬಕ್ಕೆ ಢವಢವ ಶುರುವಾಗಿಸಿದೆ.