ದುಬೈ: 2024ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಲಯದಲ್ಲಿದ್ದ ಭಾರತ ತಂಡದ ಮಾರಕ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಐಸಿಸಿ ಪುರುಷರ, ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಸೋಮವಾರ ಪ್ರಶಸ್ತಿಯನ್ನು ಘೋಷಿಸಿದೆ .
ಬೆನ್ನಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಂಡ ಆಡಲು ಇಳಿದಿದ್ದ ಬುಮ್ರಾ ಎದುರಾಳಿ ತಂಡದ ಆಟಗಾರರನ್ನು ಸತತವಾಗಿ ಕಾಡಿದ್ದರು. 2024ರಲ್ಲಿ ಆಡಿರುವ 13 ಟೆಸ್ಟ್ ಪಂದ್ಯಗಳಲ್ಲಿ 14.92 ಸರಾಸರಿಯಲ್ಲಿ 71 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಬಲಗೈ ವೇಗದ ಬೌಲರ್. ಇದು ಈ ವರ್ಷ ಬೌಲರ್ ಒಬ್ಬರ ಅತ್ಯುತ್ತಮ ಸಾಧನೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿಯ ಮೊದಲ ನಾಲ್ಕು ಟೆಸ್ಟ್‌ಗಳಲ್ಲಿ ಅವರು 30 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸರಣಿಯಲ್ಲಿ ಭಾರತ ಸೋತಿದ್ದರೂ ಬುಮ್ರಾ ಅವರ ಸಾಧನೆ ಕ್ರಿಕೆಟ್ ಲೋಕದಲ್ಲಿ ಜೋರು ಚರ್ಚೆಗೆ ಕಾರಣವಾಗಿತ್ತು.
ಟಿ20 ವಿಶ್ವಕಪ್‌ನಲ್ಲೂ ಜಸ್‌ಪ್ರಿ ಬುಮ್ರಾ ಅವರ ಅಮೋಘ ಬೌಲಿಂಗ್ ಮಾಡಿದ್ದರು. ಭಾರತ ತಂಡದ ಗೆಲುವಿನಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಪಾಕಿಸ್ತಾನ ವಿರುದ್ಧದ ಪಂದ್ಯ ಹಾಗೂ ಫೈನಲ್‌ನಲ್ಲಿಯೂ ಅವರು ಭಾರತಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಅಮೆರಿಕ–ವೆಸ್ಟ್ ಇಂಡೀಸ್‌ನಲ್ಲಿ ಈ ವರ್ಷದ ಮಧ್ಯದಲ್ಲಿ ನಡೆದ ಆ ವಿಶ್ವಕಪ್‌ನಲ್ಲಿ ಎಂಟು ಪಂದ್ಯಗಳಿಂದ 15 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಈ ಎಲ್ಲ ಸಾಧನೆಗಾಗಿ ಅವರನ್ನು ಅತ್ಯುತ್ತಮ ಕ್ರಿಕೆಟ್ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ.
357 ಓವರ್‌ಗೂ ಹೆಚ್ಚು ಬೌಲಿಂಗ್
2024ರಲ್ಲಿ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ 357 ಕ್ಕೂ ಹೆಚ್ಚು ಓವರ್ ಬೌಲ್ ಮಾಡಿದ್ದು, 2.96ರ ಸರಾಸರಿಯಲ್ಲಿ 71 ವಿಕೆಟ್ ಪಡೆದಿದ್ದಾರೆ.
ವರ್ಷದಲ್ಲಿ 70 ವಿಕೆಟ್ ಸಾಧನೆ
ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆಯುವ ಮೂಲಕ ಏಕೈಕ ಕ್ಯಾಲೆಂಡರ್ ವರ್ಷದಲ್ಲಿ 70 ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 4ನೇ ಬೌಲರ್ ಆಗಿ ಜಸ್‌ಪ್ರೀತ್ ಬುಮ್ರಾ ಗುರುತಿಸಿಕೊಂಡಿದ್ದರು. ಇದಕ್ಕೂ ಮುನ್ನ ಕಪಿಲ್ ದೇವ್, ಅನಿಲ್ ಕುಂಬ್ಳೆ ಹಾಗೂ ರವಿಚಂದ್ರನ್ ಅಶ್ವಿನ್ ಈ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-3 ಅಂತರದಿಂದ ಸೋಲು ಕಂಡರೂ ತಮ್ಮ ಉತ್ತಮ ಬೌಲಿಂಗ್ ದಾಳಿಯಿಂದಾಗಿ ಬೂಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಲ್ಲದೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಬುಮ್ರಾ, ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್‌ಗಳ ಗೆಲುವು ಸಾಧಿಸಲು ನೆರವು ನೀಡಿದ್ದರು.