ಅಮೆರಿಕದ ಡಾಲಸ್ ನಲ್ಲಿ ತಿಮ್ಮನ ಮೊಟ್ಟೆಗಳು ಚಿತ್ರ ಅದ್ದೂರಿ ಪ್ರೀಮಿಯರ್ ಶೋನೊಂದಿಗೆ ಬಿಡುಗಡೆಯಾಗಿದೆ.
ಮನುಷ್ಯ ಮತ್ತು ಪ್ರಕೃತಿ ಮಧ್ಯೆದ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲುವ ಸುಂದರ ಕೌಟುಂಬಿಕ ಕಥೆ ಹೊಂದಿರುವ ತಿಮ್ಮನ ಮೊಟ್ಟೆಗಳು ಚಿತ್ರ, ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿದೆ.

ಅಷ್ಟೇ ಅಲ್ಲ, ಕೊಲ್ಕತ್ತಾ ಅಂತಾರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರ ಎಂಬ ಹೆಗ್ಗಳಿಕೆಗೂ ಈ ಚಿತ್ರ ಪಾತ್ರವಾಗಿದೆ. ಇದರೊಂದಿಗೆ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ನ್ನು ಕೂಡ ಈ ಚಿತ್ರ ಪಡೆದಿದೆ.

ರಕ್ಷಿತ್ ತೀರ್ಥಹಳ್ಳಿ ಬರೆದ “ಕಾಡಿನ ನೆಂಟರು” ಕಥಾ ಸಂಕಲನದ ಆಯ್ದ ಒಂದು ಕಥೆಯಾಗಿರುವ ತಿಮ್ಮನ ಮೊಟ್ಟೆಗಳು ಈಗ ಸಿನಿಮಾ ರೂಪದಲ್ಲಿ ಹೊರ ಬಿದ್ದಿದೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಅವರ ಸಂಕಲನ ಹಾಗೂ ಹೇಮಂತ್ ಜೋಯಿಸ್ ಅವರ ಸುಮಧುರ ಸಂಗೀತ ಚಿತ್ರಕ್ಕಿದೆ.

ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಸುಚೇಂದ್ರ ಪ್ರಸಾದ್, ಕೇಶವ್ ಗುತ್ತಳಿಕೆ, ಆಶಿಕಾ ಸೋಮಶೇಕರ್, ಪ್ರಗತಿ ಪ್ರಭು, ಶೃಂಗೇರಿ ರಾಮಣ್ಣ, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರದಲ್ಲಿ ಕಾಳಿಂಗ ಹಾವು ಪ್ರಮುಖ ಪಾತ್ರ ವಹಿಸಿದ್ದು, ಜನ ಮೆಚ್ಚಿಕೊಳ್ಳುವ ನಿರೀಕ್ಷೆ ಚಿತ್ರ ತಂಡಕ್ಕಿದೆ.