ಚಿಕ್ಕಬಳ್ಳಾಪುರ: ಗ್ರಾಪಂ (Gram Panchayat)ನ ಮಾಜಿ ಅಧ್ಯಕ್ಷರೊಬ್ಬರ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಚರಂಡಿಯಲ್ಲಿ ಮುಚ್ಚಿ ಹಾಕಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮರಸನಹಳ್ಳಿ ಕೆರೆ ಹತ್ತಿರ ಈ ಘಟನೆ ನಡೆದಿದೆ. ಹಾರೋಬಂಡೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರೆಡ್ಡಿ(Nagareddy) ಮಗ ಮಾರುತೇಶ್(30) ಕೊಲೆಯಾಗಿರುವ ವ್ಯಕ್ತಿ. ಪಾಳುಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ಮಾರುತೇಶ್(Marutesh) ಪ್ಲಂಬರ್ ಹಾಗೂ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕುಡಿದ ಅಮಲಿನಲ್ಲಿ ಜೊತೆಗಾರನಿಂದ ಈ ಕೃತ್ಯ ನಡೆದಿದೆ ಎಂದು ಊಹಿಸಲಾಗಿದೆ.
ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾರುತೇಶ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು(police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.