ಬೀದರ್: ತಾಯಿ ಮಾಡಿದ ಕೃಷಿ ಸಾಲಕ್ಕೆ ಮಗ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ(Bidar) ಚಿಟಗುಪ್ಪ ತಾಲೂಕಿನ ರಾಂಪೂರ್ ಗ್ರಾಮದಲ್ಲಿ ನಡೆದಿದೆ. ಕೃಷಿಗಾಗಿ ತಾಯಿ ಮಾಡಿದ ಸಾಲದಿಂದ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಣೇಶ್ (26) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮೃತ ಗಣೇಶ್ ತಾಯಿ, ಕೃಷಿಗಾಗಿ ಬ್ಯಾಂಕ್ ನಲ್ಲಿ ಐದು ಲಕ್ಷ ಸಾಲ ಮಾಡಿದ್ದರು. ಗಣೇಶ್ ಕೃಷಿ ಕಾಯಕ ಮಾಡುತ್ತಿದ್ದರು. ತಾಯಿ ಪಡೆದ ಸಾಲದಿಂದ ತೊಗರಿ ಬಿತ್ತನೆ ಮಾಡಿದ್ದರು. ಆದರೆ ಬೆಳೆ ಫಲವತ್ತಾಗಿ ಬಾರದ ಹಿನ್ನೆಲೆಯಲ್ಲಿ ಸಾಲ ಪಾವತಿಸಲು ಆಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಈ ಕುರಿತು ಚಿಟ್ಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.