ಚಿಕ್ಕಬಳ್ಳಾಪುರ: ಮೈಕ್ರೋ ಫೈನಾನ್ಸ್ (Microfinance) ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರೀಶ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ತಡರಾತ್ರಿ ಮನೆಯಿಂದ ತೋಟದ ಕಡೆ ಹೋಗಿದ್ದವ ಮಧ್ಯರಾತ್ರಿ ಮನೆಗೆ ಬಂದು ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದೆ. ಟ್ರ್ಯಾಕ್ಟರ್, ಬೈಕ್ ಹಾಗೂ ಮೊಬೈಲ್‌ಗೆ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಟ್ರಾಕ್ಟರನ್ನು ಇತ್ತೀಚೆಗೆ ಬ್ಯಾಂಕ್ ನವರು ಜಫ್ತಿ ಮಾಡಿದ್ದರು ಎನ್ನಲಾಗಿದೆ. ಲೋನ್ ಮೇಲೆ ತಗೊಂಡಿದ್ದ ಬೈಕ್ ಕಂತು ಸಹ ಕಟ್ಟಲು ಕಷ್ಟವಾಗಿದ್ದು, ಹೆಂಡತಿ ಹಾಗೂ ತಾಯಿಯ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಈ ಕುರಿತು ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.