ಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಅಂತ್ಯವಾಗಿದೆ. ನಗರದಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರು ಸಂಬಳ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈಗ ಅಂತ್ಯಗೊಳಿಸಿದ್ದಾರೆ.
ಹಲವು ದಿನಗಳಿಂದ ಆರನೇ ಗ್ಯಾರಂಟಿ ಜಾರಿ ಮಾಡುವಂತೆ ಹಾಗೂ ಸಿ,ಡಿ ಗ್ರೂಪ್ ದರ್ಜೆಯ ಸಿಬ್ಬಂದಿಯಾಗಿ ಪರಿಗಣಿಸಿ ಸಮಾನ ಸಂಬಳ ನೀಡುವಂತೆ ಆಗ್ರಹಿಸಿ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದರು. ಹೋರಾಟದ ವೇದಿಕೆಗೆ ತೆರಳಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಈ ಕುರಿತು ಮನವಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಈ ಬಾರಿಯ ಬಜೆಟ್ ನಲ್ಲಿ ನಿಮ್ಮ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹೋರಾಟ ಕೈ ಬಿಟ್ಟಿದ್ದಾರೆ.