ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಬಿಬಿಎಂಪಿ ತಯಾರಿ ನಡೆಸಿದೆ.
ಹೀಗಾಗಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗಾಗಿ ಖಾಸಗಿ ಸಂಸ್ಥೆಗೆ ಟೆಂಡರ್ ನ್ನು ಬಿಬಿಎಂಪಿ ಕರೆದಿದೆ. ಆದರೆ, ಎರಡು ಬಾರಿ ಟೆಂಡರ್ ಕರೆದರೂ ಯಾವುದೇ ಗುತ್ತಿಗೆದಾರರ ಟೆಂಡರ್ ಗೆ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಬಿಬಿಎಂಪಿಯಿಂದಲೇ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ.
ಪಾಲಿಕೆ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಮೊಬೈಲ್ ಅ್ಯಪ್ ರಡಿ ಮಾಡಲಾಗಿದೆ. ಮಕ್ಕಳ ಸಮೀಕ್ಷೆಗೆ ನೋಡಲ್ ಅಧಿಕಾರಿ ನೇಮಿಸಿ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಅರೋಗ್ಯ ಇಲಾಖೆಯ ಸಿಬ್ಬಂದಿ, ಕೆಲವು ಸಂಘ-.ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ದಿನ ಒಬ್ಬರು 50 ಮನೆ ಸಮೀಕ್ಷೆ ನಡೆಸಿ ವರದಿ ನೀಡಬೇಕು. ಒಂದು ತಿಂಗಳಲ್ಲಿ ಸರ್ವೆ ಸಮೀಕ್ಷೆ ಮುಗಿಸಿ ಪಾಲಿಕೆ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.