ಚಿತ್ರದುರ್ಗ: ನಟ ರಾಕ್ಷಸ ಡಾಲಿ ಧನಂಜಯ ಈಗ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಹಲವಾರು ಮಠಾಧೀಶರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ಈಗ ಚಿತ್ರದುರ್ಗದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗಿಯಾಗಿದ್ದ ಅವರು, ಅಭಿಮಾನಿಗಳಿಗೆ ಬದುಕಿನ ಬಗ್ಗೆ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ.
ಆನ್ಲೈನ್ ಬೆಟ್ಟಿಂಗ್ ನ ಹಾವಳಿಗೆ ಸಿಲುಕಿ ಯುವ ಪೀಳಿಗೆ ಹಾಗೂ ಜನರು ತಮ್ಮ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಂತಹ ಬೆಟ್ಟಿಂಗ್ ವಿರುದ್ಧ ಡಾಲಿ ಧನಂಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾರೂ ಬೆಟ್ಟಿಂಗ್ ವ್ಯಸನಕ್ಕೆ ಒಳಗಾಗಬೇಡಿ ಎಂದು ಕಿವಿ ಮಾತು ಹೇಳಿದ ಅವರು, ಅಭಿಮಾನಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ‘ಅಭಿಮಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ಇರುತ್ತದೆ. ಕೊನೆವರೆಗೂ ನಿಮ್ಮ ಪ್ರೀತಿ ಹೀಗೆಯೇ ಇರಲಿ’ ಎಂದು ಅವರು ಹೇಳಿದ್ದಾರೆ.