ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ ಫೆ.16ರಂದು ಡಾ. ಧನ್ಯತಾ ಅವರೊಂದಿಗೆ ಸಪ್ತಪದಿ ತುಳಿಯುತ್ತಿದ್ದಾರೆ. ಹೀಗಾಗಿ ಸೆಲೆಬ್ರಿಟಿಗಳು, ರಾಜಕೀಯ ನಾಯಕರು, ಮಠಾಧೀಶರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಲ್ಲದೇ, ಅಭಿಮಾನಿಗಳಿಗೂ ಬಂದು ಹಾರೈಸುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ನಟ ದರ್ಶನ್ ಗೆ ಆಹ್ವಾನ ನೀಡಿಲ್ಲ ಎನ್ನಲಾಗುತ್ತಿದೆ.
ಇಂದು ಡಾಲಿ ಜೋಡಿ ಸುದ್ದಿಗೋಷ್ಠಿ ಮಾತನಾಡಿದ್ದು, ದರ್ಶನ್‌ರನ್ನು (Darshan) ಅವರನ್ನು ಸಂಪರ್ಕಿಸಲು ಪ್ರಯತ್ನ ಪಟ್ಟೆ, ಆದರೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡುತ್ತೇನೆ. ಯಾರನ್ನೂ ಬಿಟ್ಟಿಲ್ಲ, ಎಲ್ಲರನ್ನೂ ಕರೆದಿದ್ದೇನೆ. ಶೀಘ್ರದಲ್ಲೇ ಅದೂ ನೆರವೇರುತ್ತದೆ. ಅದನ್ನು ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಹೇಳಿದ್ದಾರೆ.