ರಾಯಚೂರು: ಕಾಮುಕನೊಬ್ಬ ಅಪ್ರಾಪ್ತ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ(Sexually Assaulted) ನಡೆಸಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಮಾನ್ವಿ (Manvi) ತಾಲ್ಲೂಕಿನಲ್ಲಿ ನಡೆದಿದೆ.
ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಶಿವನಗೌಡ ಎಂಬ ಕಾಮುಕ ಈ ಕೃತ್ಯ ಎಸಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಶಾಲೆಯಿಂದ (School) ಹೊರಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿ ಶಿವನಗೌಡಗೆ ಮಾತು ಬರುವುದಿಲ್ಲ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ ನಂತರ ಗ್ರಾಮದಲ್ಲಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಆತ ಅಡಗಿ ಕುಳಿತಿದ್ದಾನೆ. ಆ ನಂತರ ಗ್ರಾಮಸ್ಥರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯ ಸ್ವಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಬಾಲಕಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದೆ.
ಶಾಲಾ ವ್ಯವಸ್ಥಾಪಕನ ವಿರುದ್ದ ಪೋಷಕರ ಕಿಡಿ ಕಾರಿದ್ದು, ಅಪರಿಚಿತನೊಂದಿಗೆ ಮಗಳನ್ನು ಕಳುಹಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಶಾಲಾ ವ್ಯವಸ್ಥಾಪಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.