ಬೆಂಗಳೂರು: ನಟ ಕಿಚ್ಚ ಸುದೀಪ್ ದಿಢೀರ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ.
ಫೆ. 8ರಿಂದ ಸಿಸಿಎಲ್ 11ನೇ ಸೀಸನ್ ಆರಂಭವಾಗಲಿದೆ. ಹೀಗಾಗಿ ಕಾರ್ಯಕ್ರಮ ಉದ್ಘಾಟಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಆಹ್ವಾನಿಸಲು ಸುದೀಪ್ (Sudeep) ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಸುದೀಪ್‌ಗೆ ಡೈರೆಕ್ಟರ್ ಅನೂಪ್ ಭಂಡಾರಿ ಸಾಥ್ ನೀಡಿದ್ದಾರೆ. ಫೆ.8ರಂದು ಕರ್ನಾಟಕ ಬುಲ್ಡೋಜರ್ ತಂಡದವರು ಹೈದರಾಬಾದ್ ವಿರುದ್ಧ ಮೊದಲ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದಾರೆ.
ಇತ್ತೀಚೆಗೆ ಸಿಸಿಎಲ್ ಕುರಿತು ಸುದ್ದಿಗೋಷ್ಠಿ ನಡೆದಿತ್ತು. ಈ ಬಾರಿ ಒಟ್ಟು 7 ತಂಡಗಳು ಸೆಣಸಾಟ ನಡೆಸಲಿವೆ. ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್‌ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್ ಸೇರಿದಂತೆ 7 ತಂಡಗಳು ಭಾಗವಹಿಸಲಿವೆ. ಸುದೀಪ್ ಈಗಿನಿಂದಲೇ ಸಿದ್ಧತೆ ಮಾಡಿಕೊಂಡಿದ್ದಾರೆ.