ಬೆಂಗಳೂರು: ಹ್ಯಾಕರ್ ಶ್ರೀಕಿ ಜೊತೆ ನಂಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಎಸ್ ಐಟಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ಎಸ್ಐಟಿ ಅಧಿಕಾರಿಗಳು ಬುಧವಾರ ನೋಟಿಸ್ ನೀಡಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ನಲಪಾಡ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಡಿವೈಎಸ್ಪಿ ಬಾಲರಾಜ್ ಎದುರು ಇಂದು ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.