ಬೆಂಗಳೂರು: ಬ್ಯಾಂಕ್ ಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ (Bank fraud Case)ದೋಷಿಯಾಗಿರುವ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ್ ಅವರು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿತ್ತು. ಆದರೆ, ಸಂಜೆ ವೇಳೆ ಶಿಕ್ಷೆಯ ಪ್ರಮಾಣ ಘೋಷಿಸಿತು.
3 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್, ಜಾಮೀನು ಮಂಜೂರು ಮಾಡಿದೆ. ಕೃಷ್ಣಯ್ಯ ಶೆಟ್ಟಿ ಪರ ವಕೀಲರು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ ನಂತರ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.
2012 ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಆದರೆ, ಈ ಪೈಕಿ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ಪ್ರಕಟಿಸಿದೆ.