ನಾಗ್ಪುರ: ರೋಹಿತ್ ಶರ್ಮಾ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ (IND vs ENG) ಮೊದಲ ಪಂದ್ಯದಲ್ಲಿ ಮತ್ತೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ರನ್ ಮಾಡಲು ಅವರಿಗೆ 5 ಎಸೆತಗಳು ಬೇಕಾಯಿತು. ಈ ಪಂದ್ಯದಲ್ಲಿ ಎರಡಂಕಿ ವೈಯಕ್ತಿಕ ಮೊತ್ತ ಕಲೆ ಹಾಕಲೂ ಸಾಧ್ಯವಾಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರೆ ವಿರೋಧಿಗಳಿಗೆ ಟೀಕೆ ಮಾಡಲು ಮತ್ತೊಂದು ಅಸ್ತ್ರ ದೊರಕಿದೆ. ಹೀಗಾಗಿ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿ ಎಂದು ಆಗ್ರಹಿಸಿದ್ದಾರೆ.
ಮುನ್ನ ಆಸ್ಟ್ರೇಲಿಯಾ ಪ್ರವಾಸದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿಯೂ ರೋಹಿತ್ ಶರ್ಮಾ ಸಂಪೂರ್ಣ ವಿಫಲರಾಗಿದ್ದರು. ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಕೇವಲ 31 ರನ್ ಗಳಿಗೆ ಸೀಮಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಕ್ರಿಕೆಟ್ ವೃತ್ತಿ ಬದುಕಿನ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ತವರಿಗೆ ಮರಳಿದ ನಂತರ, ಅವರು ಮುಂಬೈ ಪರ ರಣಜಿ ಟ್ರೋಫಿ ಪಂದ್ಯದಲ್ಲಿ ಆಡಿದ್ದರು. ಅಲ್ಲಿಯೂ ರನ್ ಗಳಿಕೆ ಮಾಡಿರಲಿಲ್ಲ. ಇದೀಗ ಮೊದಲನೇ ಏಕದಿನ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದ್ದಾರೆ.
ದಯವಿಟ್ಟು ನಿವೃತ್ತಿ ಘೋಷಿಸಿ
ಮೊದಲನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಬೆನ್ನಲ್ಲೆ ಅಭಿಮಾನಿಗಳು ರೋಹಿತ್ ಶರ್ಮಾ ವಿರುದ್ಧ ಕಿಡಿ ಕಾರಿದ್ದಾರೆ. ದಯವಿಟ್ಟು ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿ ಎಂದು ಒತ್ತಾಯಿಸಿದ್ದಾರೆ. “ರೋಹಿತ್ ಶರ್ಮಾ ಅವರು ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಬೇಕೆಂದರೆ ಅವರನ್ನು ಸತಾಯಿಸಿ ,” ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ.
ರೋಹಿತ್ ಶರ್ಮಾ ವಿಫಲ
“ರೋಹಿತ್ ಶರ್ಮಾ ಅವರು ಉತ್ತಮ ಆಟ ಕಳೆದುಕೊಂಡಿದ್ದಾರೆ. ಭಾರತ ಅಥವಾ ಭಾರತದ ಹೊರಗೆ ಟೆಸ್ಟ್ ಆಗಲಿ, ಒಡಿಐ ಆಗಲಿ ಅಥವಾ ಟಿ20ಐ ಆಗಲಿ, ಪವರ್‌ಪ್ಲೇನಲ್ಲಿ ಹಾಗೂ ಪವರ್‌ಪ್ಲೇ ಹೊರಗೆ ಅವರು ಪರಿಣಾಮಕಾರಿಯಾಗಿ ಆಡುತ್ತಿಲ್ಲ,” ಎಂದು ಮತ್ತೊಬ್ಬ ಅಭಿಮಾನಿ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.
ಪಂದ್ಯದಲ್ಲಿ ಭಾರತಕ್ಕೆ ಗೆಲುವು
ರ್ವತೋಮುಖ ಪ್ರದರ್ಶನ ನೀಡಿದ ಭಾರತ ತಂಡ, ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತು. ಟಿ20ಐ ಸರಣಿ ಸೋಲಿಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದ್ದ ಇಂಗ್ಲೆಂಡ್ ಪಡೆ ಏಕದಿನ ಸಿರೀಸ್ನಲ್ಲೂ ಆಘಾತ ಅನುಭವಿಸಿದೆ. 2023ರ ವಿಶ್ವಕಪ್ ನಂತರ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿದ 8 ಏಕದಿನ ಪಂದ್ಯಗಳಲ್ಲಿ 7ರಲ್ಲಿ ಸೋತಿರುವುದು ಈ ಫಲಿತಾಂಶದ ವಿಶೇಷ .
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ, ಹರ್ಷಿತ್ ರಾಣಾ ತಲಾ ಮೂರು ವಿಕೆಟ್ ಉರುಳಿಸಿ ಪ್ರವಾಸಿ ತಂಡವನ್ನು 47.4 ಓವರ್ಗಳಲ್ಲಿ 248 ರನ್ಗಳಿಗೆ ಆಲ್‌ಔಟ್ ಮಾಡಿದರು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಶ್ರೇಯಸ್ ಅಯ್ಯರ್ (59), ಶುಭ್ಮನ್ ಗಿಲ್ (87) ಮತ್ತು ಅಕ್ಷರ್ ಪಟೇಲ್ (52) ಬ್ಯಾಟಿಂಗ್ ಬಲದಿಂದ 38.4 ಓವರ್ಗಳಿಗೆ 6 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿತು.