ಬೆಂಗಳೂರು: ನಡು ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆಯೊಂದು ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ಕೆಂಗೇರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ಸಂದರ್ಭದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿತ್ತಿದ್ದಂತೆ ಚಾಲಕ ಕಾರಿನಿಂದ ಹೊರ ಬಂದಿದ್ದಾರೆ. ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ರಸ್ತೆಯಲ್ಲಿ ಹಾದು ಹೋಗುವವರೆಲ್ಲ ಈ ದೃಶ್ಯ ಕಂಡು ಶಾಕ್ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.