ತುಮಕೂರು: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗಲೇ ರಾಜ್ಯದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿರಾ (Sira) ತಾಲೂಕಿನ ಬರಗೂರು ಮೂಲದ ನಾಗರಾಜ್ (57) ಸಾವನ್ನಪ್ಪಿರುವ ದುರ್ದೈವಿ. ಎಲ್ ಎನ್ ಪಿ ಬ್ರಿಕ್ಸ್ ಮಾಲೀಕ ನಾಗರಾಜು ತಮ್ಮ ಸ್ನೇಹಿತರೊಂದಿಗೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ಈ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಸಂಧ್ಯಾ ವಂದನೆ ಮಾಡಿ ಪುಣ್ಯಸ್ನಾನ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.