ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೊನೆಗೂ ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕೊನೆಗೂ ಲಗಾಮು ಬಿದ್ದಂತಾಗಿದೆ.
ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರು, ಕೆಲವು ಸಲಹೆಗಳನ್ನು ನೀಡಿದ್ದು, ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವುದಾಗಿ ಸರ್ಕಾರ ಇತ್ತೀಚೆಗೆ ಹೇಳಿತ್ತು. ಹೀಗಾಗಿ ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಿಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಈ ಕಾನೂನು ಮಾರಕವಾಗಬಹುದು ಎಂಬ ಕಾರಣ ನೀಡಿ, ಸರ್ಕಾರದ ಸ್ಪಷ್ಟನೆ ಕೇಳಿದ್ದರು.
ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಾಧಕ- ಬಾಧಕದ ಕುರಿತು ಚರ್ಚೆ ನಡೆಸಿ ಅಂತಾ ಹೇಳಿದ್ದ ರಾಜ್ಯಪಾಲರು, ಈಗಿರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ ಎಂದು ಪೊಲೀಸ್ ವ್ಯವಸ್ಥೆ ಬಗ್ಗೆಯೂ ಅಸಮಾಧನ ಹೊರಹಾಕಿದ್ದರು. ಇದಕ್ಕೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ತಪ್ಪು ಗ್ರಹಿಕೆಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆನಂತರ ಮರು ಸಲ್ಲಿಕೆ ಮಾಡಲಾಗಿತ್ತು.