ವಿಜಯಪುರ : ಹೈಕಮಾಂಡ್ ಕೊಟ್ಟಿರುವ ನೋಟಿಸ್ ಬಂದಿಲ್ಲ. ಬಂದರೂ ಉತ್ತರ ನೀಡುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ನನಗೆ ವರಿಷ್ಠರ ಯಾವುದೇ ನೋಟಿಸ್ ಬಂದಿಲ್ಲ. ಬಂದರೂ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ. ಅಂತಹ ನೂರಾರು ನೋಟಿಸ್ ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಶಾಸಕ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿತ್ತು. ಮೂರು ದಿನಗಳೊಳಗೆ ಉತ್ತರ ನೀಡಿದ್ದರೆ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಆದರೆ, ಇದಕ್ಕೆ ನೋಟಿಸ್ ಬಂದಿಲ್ಲ ಎಂದು ಯತ್ನಾಳ್ ಉತ್ತರಿಸಿದ್ದಾರೆ. ಅಲ್ಲದೇ, ಬಂದರೂ ಉತ್ತರ ನೀಡುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.