ಮುಂಬೈ: ನಟ ಪ್ರಭಾಸ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ. ಇವರು ಪ್ರತಿಯೊಂದು ಸಿನಿಮಾದಲ್ಲಿ ನಟಿಸಲು 100 ರಿಂದ 200 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಎಷ್ಟೇ ದುಬಾರಿ ಸಂಭಾವನೆ ಕೇಳಿದರೂ ಕೊಡಲು ಹಲವು ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಆದರೂ ಪ್ರಭಾಸ್ ಇತ್ತೀಚೆಗಿನ ಸಿನಿಮಾ ಒಂದರಲ್ಲಿ ಒಂದೇ ಒಂದು ರೂಪಾಯಿಯನ್ನು ಕೂಡ ಪಡೆಯದೆ ಉಚಿತವಾಗಿ ನಟಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಭಾಸ್, ಬೇರೆಯೊಬ್ಬರ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ನಟಿಸುವುದು ಕಡಿಮೆ. ಕೇವಲ ಒಂದೇ ಸಿನಿಮಾದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಇತ್ತೀಚೆಗೆ ಪ್ರಭಾಸ್ ತಾವೇ ಬಯಸಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ನಟಿಸಲು ಹಣ ಪಡೆದಿಲ್ಲ ಎಂದು ತಿಳಿದು ಬಂದಿದೆ.
ಡಾ. ರಾಜ್ಕುಮಾರ್ ನಾಯಕನಾಗಿ ನಟಿಸಿದ ಮೊದಲ ಸಿನಿಮಾ ‘ಬೇಡರ ಕಣ್ಣಪ್ಪ’. ಈ ಸಿನಿಮಾ ಈಗ ‘ಕಣ್ಣಪ್ಪ’ ಹೆಸರಿನಲ್ಲಿ ತೆರೆಗೆ ಬರಲಿದ್ದು ಈ ಸಿನಿಮಾದಲ್ಲಿ ಪ್ರಭಾಸ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವನ ಭಕ್ತನ ಪಾತ್ರದಲ್ಲಿ ಪ್ರಭಾಸ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ, ಈ ಚಿತ್ರದಲ್ಲಿ ನಟಿಸಲು ಪ್ರಭಾಸ್ ಒಂದೇ ಒಂದು ರೂಪಾಯಿ ಸಂಭಾವನೆ ಪಡೆದಿಲ್ಲ ಎಂದು ತಿಳಿದು ಬಂದಿದೆ.
ಈ ಚಿತ್ರದಲ್ಲಿ ಪ್ರಭಾಸ್ ಅಷ್ಟೇ ಅಲ್ಲದೇ, ಮೋಹನ್ ಲಾಲ್, ಅಕ್ಷಯ್ ಕುಮಾರ್ ಕೂಡ ನಟಿಸಿದ್ದಾರೆ. ಈ ಚಿತ್ರ ಏಪ್ರಿಲ್ 25ಕ್ಕೆ ತೆರೆಗೆ ಬರಲಿದೆ.