ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ದುರಂತ ನಡೆದಿದೆ.
ನಗರದಲ್ಲಿನ ಬ್ಯಾಡರಹಳ್ಳಿ ಪೊಲೀಸಾ ಠಾಣೆಯ ಪಕ್ಕದಲ್ಲಿರುವ ಪ್ಲಾಸ್ಟಿಕ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಎರಡು ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.