ಬೆಂಗಳೂರು: ಇಲ್ಲಿನ ಕೆ.ಆರ್.ಮಾರುಕಟ್ಟೆ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.ಈ ಘಟನೆ ಕೆ.ಆರ್. ಮಾರ್ಕೆಟ್ ಫ್ಲೈ ಓವರ್ ಮೇಲೆ ಇಂದು ಬೆಳಗಿನ ಜಾವ ನಡಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಅಲ್ಲದೇ, ಬಸ್ ನಡಿ ಎರಡು ಬೈಕ್ ಗಳು ಸಿಲುಕಿದ್ದು,
ಎರಡೂ ಬೈಕ್ ಗಳು ಸಂಪೂರ್ಣವಾಗಿ ಜಖಂಡಗೊಂಡಿವೆ. ಘಟನೆ ನಡೆಯುತ್ತಿದ್ದಂತೆ ಬಿಎಂಟಿಸಿ ಬಸ್ ಚಾಲಕ ರಸ್ತೆಯಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಈ ಬಸ್ ಕೆಂಗೇರಿಯಿಂದ ಮೆಜೆಸ್ಟಿಕ್ ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಬಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.