ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ದ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ವರದಿ ಸಲ್ಲಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮುಡಾ ಪ್ರಕರಣದ ಅಂತಿಮ ತನಿಖಾ ವರದಿ, ಲೋಕಾಯುಕ್ತ ಕೇಂದ್ರ ಕಚೇರಿ ತಲುಪಿದೆ.
ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ತನಿಖಾ ವರದಿ ಸಲ್ಲಿಕೆ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದರೆ, ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಇಲ್ಲದೇ ಹೋದರೆ, ಸಿಎಂಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.