ಮುಂಬಯಿ: ಐಪಿಎಲ್ 18ನೇ ಆವೃತ್ತಿಗೆ ಮಾರ್ಚ್ 22ರ ಶನಿವಾರದಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಹಾಲಿ ಚಾಂಪಿಯನ್ ಕೋಲ್ಕತ ನೈಟ್ರೈಡರ್ಸ್ ಮತ್ತು ಆರ್ಸಿಬಿ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಎಲ್ಲ ಫ್ರಾಂಚೈಸಿಗಳು ಪಂದ್ಯಾವಳಿಗೆ ಸಿದ್ಧತೆ ಆರಂಭಿಸಿದ್ದು, ಕೆಲ ಆಟಗಾರರು ಅಭ್ಯಾಸ ಶುರು ಮಾಡಿದ್ದಾರೆ. ಏತನ್ಮಧ್ಯೆ, ಅಫ್ಘಾನಿಸ್ತಾನದ ಬೌಲಿಂಗ್ ಆಲ್ರೌಂಡರ್ ಮುಜೀಬ್ ಉರ್ ರೆಹಮಾನ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.
ಬೆನ್ನುಮೂಳೆಯ ಗಾಯದಿಂದಾಗಿ 18 ವರ್ಷದ ಸ್ಪಿನ್ನರ್ ಅಲ್ಲಾ ಗಜನ್‌ಫರ್ ಹೊರಬಿದ್ದ ಕಾರಣ ಮುಜೀಬ್‌ಗೆ ಈ ಅವಕಾಶ ಸಿಕ್ಕಿದೆ. ಗಜನ್‌ಫರ್ ಕೂಡ ಆಫ್ಘಾನ್ ಆಟಗಾರ. 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ನೋಂದಾಯಿಸಿದ್ದ ಮುಜೀಬ್ ಉರ್ ರೆಹಮಾನ್ ಅನ್‌ಸೋಲ್ಡ್ ಆಗಿದ್ದರು. ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮುಂಬೈ ಸೇರಿದ್ದಾರೆ. ಐಪಿಎಲ್‌ನಲ್ಲಿ 19 ಪಂದ್ಯಗಳನ್ನಾಡಿರುವ ಮುಜೀಬ್ 19 ವಿಕೆಟ್ ಕಿತ್ತಿದ್ದಾರೆ.
5 ಬಾರಿಯ ಚಾಂಪಿಯನ್ ಮುಂಬೈ ಕಳೆದ ಬಾರಿಯ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ತೋರಿತ್ತು. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದು ಮುಖಭಂಗ ಅನುಭವಿಸಿತ್ತು. ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದ್ದರು.
ಮುಂಬೈ ತಂಡ
ಜಸ್‌ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್, ಕರ್ಣ್ ಶರ್ಮ, ದೀಪಕ್ ಚಹರ್, ವಿಲ್ ಜಾಕ್ಸ್ , ಮಿಚೆಲ್ ಸ್ಯಾಂಟ್ನರ್ , ರ್ಯಾನ್ ರಿಕೆಲ್ಟನ್ , ಅಶ್ವನಿ ಕುಮಾರ್, ರೀಸ್ ಟಾಪ್ಲೆ, ಕೆಎಲ್ ಶ್ರೀಜಿತ್ , ರಾಜ್ ಅಂಗದ್ ಬಾವ , ಸತ್ಯನಾರಾಯಣ ರಾಜು, ಬೆವನ್ ಜೇಕಬ್ಸ್, ವಿಘ್ನೇಶ್ ಪುಥರ್, ಅರ್ಜುನ್ ತೆಂಡೂಲ್ಕರ್, ಲಿಜಾಡ್ ವಿಲಿಯಮ್ಸ್.