ಚಿಕ್ಕಮಗಳೂರು: ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮೂಡಿಗೆರೆ (Mudigere) ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾಗಿರುವ ಮಹಿಳೆಯನ್ನು ಯಮುನಾ (65) ಎಂದು ಗುರುತಿಸಲಾಗಿದೆ. ಅಳಿಯನೇ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಅಳಿಯ ಶಶಿಧರ್ ಕೊಲೆ ಮಾಡಿರುವ ಆರೋಪಿ. ಕೊಲೆ ಮಾಡಿದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.