ಮಂಗಳೂರು: ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು(Honey Bee Attack) ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ(Dakshina Kannada) ಬೆಳ್ತಂಗಡಿ (Belthangady) ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಪ್ರಾರ್ಥನೆ ಮುಗಿಸಿ ತರಗತಿ ಒಳಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ.