ತುಮಕೂರು: ಹಾಸ್ಟೆಲ್ ನಲ್ಲಿ ಊಟ ಮಾಡಿದ್ದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಶಿರಾ ಪಟ್ಟಣದ ವಸತಿ ಶಾಲೆಯಲ್ಲಿ ನಡೆದಿದೆ. ಊಟ ಮಾಡಿದ್ದ ಸುಮಾರು 30 ರಿಂದ 40 ವಿದ್ಯಾರ್ಥಿಗಳು (Student) ಅಸ್ವಸ್ಥರಾಗಿದ್ದಾರೆ. ಕಲುಷಿತ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರಾಗಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.