ಕಾರವಾರ: ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಕಾರಿಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆಯೊಂದು ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಮಾರ್ಗವಾಗಿ ಹೊರಟಿದ್ದ ಇಡೀ ಕುಟುಂಬ ಬಲಿಯಾಗಿದೆ. ಗಂಡ, ಹೆಂಡ್ತಿ ಹಾಗೂ ಮಗು ದುರಂತ ಅಂತ್ಯಕಂಡಿದ್ದಾರೆ. ಪತಿ ಆರ್ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಚಿಕ್ಕ ಮಗು ಶ್ರೀಹಾನ್ ಸಾವನ್ನಪ್ಪಿರುವ ದುರ್ದೈವಿಗಳು.
ಲಾರಿಯೊಂದು ಓವರಟೇಕ್ ಮಾಡುವ ಭರದಲ್ಲಿ ಎದುರು ಬರುತ್ತಿದ್ದ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮಗು ಕೂಡ ಸಾವನ್ನಪ್ಪಿದೆ. ಮೃತ ವೆಂಕಟೇಶನ ಸಹೋದರ ಶ್ರೀಕಾಂತ ರೆಡ್ಡಿಗೂ ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.