ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಮೊದಲು “ಶ್ವೇತಪತ್ರ”ವನ್ನು ಹೊರಡಿಸಲಿ ಎಂದು ಆಗ್ರಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಆಗಿ ಹಲವು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಅವರು ಮುಖ್ಯಮಂತ್ರಿ ಮಾತ್ರವಲ್ಲದೆ ಆರ್ಥಿಕ ತಜ್ಞ ಕೂಡ ಹೌದು. ಅವರ ಬಜೆಟ್‌ನಲ್ಲಿ ಹಲವು ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿದೆ. ಈಗ “ಶ್ವೇತಪತ್ರ” ಹೊರಡಿಸುವ ಸಂದರ್ಭ ಬಂದಿಲ್ಲ. ಮುಂದೆ ಅಂತಹ ಸಂದರ್ಭ ಬಂದರೆ ಸರ್ಕಾರದ ವತಿಯಿಂದ “ಶ್ವೇತಪತ್ರ” ಹೊರಡಿಸುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.