ಬೆಂಗಳೂರು: ಪಾಲಿಕೆ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತಾವೇ ಪಾಠ ಮಾಡಿ, ಆತ್ಮವಿಶ್ವಾಸ ವೃದ್ಧಿ ಮಾಡುತ್ತಿದ್ದಾರೆ.
ಬೆಂಗಳೂರು ನಗರವು ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಫಲಿತಾಂಶ ಕಾಣಲಿ ಎಂಬ ನಿಟ್ಟಿನಲ್ಲಿ ಸ್ವತಃ ಅವರೇ ಖುದ್ದಾಗಿ ಫೀಲ್ಡ್ ಗೆ ಇಳಿದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡುತ್ತಿದ್ದಾರೆ. ಈ ಬಾರಿ ವಿಶೇಷ ಆಯಕ್ತರು ಶೇ. 90ರಷ್ಟು ಫಲಿತಾಂಶದ ಟಾರ್ಗೆಟ್ ನೀಡಿದ್ದಾರೆ. ಹೀಗಾಗಿ ಸ್ವತಃ ತಾವೇ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಪಾಠ ಮಾಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬಿಬಿಎಂಪಿ ವ್ಯಾಪ್ತಿಯ ಸುಮಾರು 7,398 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ.